ಸೋಲಲಿ ಮಕ್ಕಳ ಸೋಲಿನ ಭಯ
ಮಗು ಬಿಸಿನೀರ ಕಾಯಿಸಿ, ಇಕ್ಕಳದಿಂದ ಲೋಟಕ್ಕೆ ನೀರನ್ನು ಎರಸುವಾಗ, ನೀರು ಕೆಳಗೆ ಚೆಲ್ಲಿತೋ.. "ನೀರು ಚೆಲ್ಲಿದ್ಯಾ? ಎದ್ದೇಳು ಮಾರಾಯ್ತಿ, ನಾನು ಮಾಡಿ ಕೊಡ್ತೀನಿ, ನಿಂಗೆ ಒಂದು ಕೆಲಸವೂ ನೆಟ್ಟಗೆ ಮಾಡಲು ಬರುವುದಿಲ್ಲ. ಸುಮ್ನೆ ನನಗಿಲ್ಲಿ ಒಂದಷ್ಟು ತೊಂದರೆ ಕೊಡಕ್ಕೆ.. " ಆಟದಲ್ಲಿ ನಾಲ್ಕು ರೌಂಡ್ ಭಾಗವಹಿಸಿ, ಐದನೇ ರೌಂಡ್ ಗೆ ಸೋಲಾಗಿ ಬಂದ ಮಗುವಿಗೆ, "ಇನ್ನೊಂಚೂರು ಗಮನ ಇಟ್ಟು ಆಡಿದ್ರೆ ಏನಾಗ್ತಿತ್ತು ನಿಂಗೆ? ಅಲ್ಲಿ ಇಲ್ಲಿ ನೋಡ್ತಾ ಕೂರ್ತೀಯ ಲೇಜಿ ತರ, ಏನ್ ಪ್ರಯೋಜನ ಈಗ ಅತ್ರೆ, ಸೀರಿಯಸ್ ಇಲ್ಲ ನೀನು ಸ್ಪೋರ್ಟ್ಸ್ ಕಡೆ, ಈ ಚಂದಕ್ಕೆ ಕೋಚಿಂಗ್ ಯಾಕೆ ನಿಂಗೆ? ಎಲ್ಲ ದುಡ್ಡು ವೇಸ್ಟ್" "ಅಯ್ಯೋ ಅಲ್ಲಿ ಹತ್ತಬೇಡ, ಬಿದ್ದೋಗ್ತೀಯ, ಬಿದ್ದರೆ ನಾನು ಬರಲ್ಲ ಆಮೇಲೆ ಎತ್ತಕ್ಕೆ" "ಚೆನ್ನಾಗಿ ಓದಿದ್ದೆಅಂತೀಯಾ, ಎಕ್ಷಾಮ್ ಟೆನ್ಶನ್ ಮಾಡ್ಕೊಂಡ್ರೆ ಇನ್ನೇನಾಗತ್ತೆ, ಈಗ ಇಲ್ಲಿ ಆನ್ಸರ್ ಬರ್ತ್ತಿತ್ತು ಅಂದ್ರೆ ಏನು ಪ್ರಯೋಜನ, ಯು ಜಸ್ಟ್ ಲಾಸ್ಟ್ ಯುವರ್ ಗೋಲ್ಡನ್ಚಾನ್ಸ್" "ಅಯ್ಯೋ ಏನು ಕೆಟ್ಟವರು ಆ ಕೋಚ್, ಕೈ ಕಾಲಿಗೆ ನೋವಾಗಿದೆ ಅಂತಿದಾಳೆ ಮಗಳು, ಆದ್ರೂನೂ ಆಡು ಅಂತಾರಲ್ಲ, ಸ್ವಲ್ಪನೂ ಕರುಣೇನೇ ಇಲ್ಲ. ಇದೇ ತರ ನೋವಾಗಿ ನೋವಾಗಿ ಕೈ ಕಾಲು ಮುರ್ಕೊಂಡ್ರೆ?" "ಲಕ್ಷಗಟ್ಟಲೆ ದುಡ್ಡು ಕೊಟ್ಟು ಇಷ್ಟು ಫೇಮಸ್ಸ್ಕೂಲ್ ಗೆ ಹಾಕಿದೀವಿ, ಗೇರ್ ಸೈಕಲ್, VR ಗೇಮ್ಸು, ಎಲ್ಲಾ ಕೊಟ್ಟಾ...